1 John 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನ ಬಗ್ಗೆ ಹೀಗೆ ಹೇಳದ ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಕ್ರಿಸ್ತವಿರೋಧಿಯು ಬರುತ್ತಾನೆ ಎಂಬುದನ್ನು ನೀವು ಕೇಳಿರುವಿರಿ. ಕ್ರಿಸ್ತವಿರೋಧಿಯು ಈಗಾಗಲೇ ಈ ಲೋಕದಲ್ಲಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.
Kannada BSI Bible 2016
ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವನ್ನು ಒಪ್ಪದೆ ಇರುವ ಆತ್ಮವು ದೇವರಿಂದ ಪ್ರೇರಿತವಾದದ್ದಲ್ಲ; ಅದು ಕ್ರಿಸ್ತ ವಿರೋಧಿಯ ಆತ್ಮವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿದ್ದೀರಲ್ಲಾ; ಈಗಲೂ ಲೋಕದಲ್ಲಿ ಅದೆ.
Kannada Bible (KNCL) BSI 2016
ಯೇಸುವನ್ನು ಒಪ್ಪಿಕೊಳ್ಳದ ಆತ್ಮ ದೇವರಿಂದ ಪ್ರೇರಿತವಾದುದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಅದು ಬರುವುದೆಂದು ನೀವು ಕೇಳಿದ್ದೀರಿ; ಈಗಾಗಲೇ ಅದು ಲೋಕದಲ್ಲಿ ತಲೆದೋರಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನರಮಾಂಸದಲ್ಲಿ ಬಂದ ಯೇಸುವನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುವುದೆಂಬುದನ್ನು ನೀವು ಕೇಳಿದ್ದೀರಲ್ಲಾ. ಈಗಲೂ ಅದು ಲೋಕದಲ್ಲಿ ಇದೆ.
Recommended Reading