1 John 4:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರು (ಸುಳ್ಳುಬೋಧಕರು) ಈ ಲೋಕಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಅವರು ಹೇಳುವುದೆಲ್ಲವೂ ಈ ಲೋಕಕ್ಕೆ ಸೇರಿವೆ. ಅವರು ಏನೇ ಹೇಳಿದರೂ ಲೋಕವು ಕೇಳುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
Kannada BSI Bible 2016
ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಲೋಕದಿಂದ ಹುಟ್ಟಿದವರಾಗಿದ್ದಾರೆ; ಈ ಕಾರಣದಿಂದ ಅವರು ಲೋಕಪ್ರೇರಿತರಾಗಿ ಮಾತಾಡುತ್ತಾರೆ. ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
Kannada Bible (KNCL) BSI 2016
ಅವರು ಲೋಕಕ್ಕೆ ಸೇರಿದವರು. ಆದ್ದರಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ. ಎಂದೇ, ಲೋಕವು ಅವರಿಗೆ ಕಿವಿಗೊಡುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.