1 John 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವಾದರೋ ದೇವರಿಂದ ಬಂದವರು. ಆದ್ದರಿಂದ ದೇವರನ್ನು ಬಲ್ಲ ಜನರು ನಮಗೆ ಕಿವಿಗೊಡುತ್ತಾರೆ, ಆದರೆ ದೇವರಿಂದ ಬಂದಿಲ್ಲದ ಜನರು ನಮ್ಮ ಮಾತುಗಳನ್ನು ಕೇಳುವುದಿಲ್ಲ. ಯಾವುದು ಸತ್ಯವನ್ನು ಬೋಧಿಸುವ ಆತ್ಮ, ಯಾವುದು ಸುಳ್ಳನ್ನು ಬೋಧಿಸುವ ಆತ್ಮ ಎಂಬುದನ್ನು ಹೀಗೆ ತಿಳಿದುಕೊಳ್ಳುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.
Kannada BSI Bible 2016
ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವಂತೂ ದೇವರಿಂದ ಹುಟ್ಟಿದವರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಂದ ಹುಟ್ಟದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯವನ್ನು ಬೋಧಿಸುವ ಆತ್ಮ, ಅದು ಸುಳ್ಳನ್ನು ಬೋಧಿಸುವ ಆತ್ಮ ಎಂದು ಇದರಿಂದಲೇ ತಿಳುಕೊಳ್ಳುತ್ತೇವೆ.
Kannada Bible (KNCL) BSI 2016
ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ.