1 John 5:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವೇ ಕ್ರಿಸ್ತನೆಂದು ನಂಬುವವರು ದೇವರ ಮಕ್ಕಳಾಗಿದ್ದಾರೆ. ತಂದೆಯನ್ನು (ದೇವರನ್ನು) ಪ್ರೀತಿಸುವವನು ತಂದೆಯ ಮಕ್ಕಳನ್ನೂ ಪ್ರೀತಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.
Kannada BSI Bible 2016
ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.
Kannada Bible (KNCL) BSI 2016
ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.