1 John 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನಲ್ಲಿ ಆ ಮಗನಿರುತ್ತಾನೋ ಅವನಲ್ಲಿ ಆ ಜೀವವಿದೆ. ಆದರೆ ಯಾವನಲ್ಲಿ ದೇವರ ಮಗನು ಇರುವುದಿಲ್ಲವೋ ಅವನಲ್ಲಿ ಆ ಜೀವವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
Kannada BSI Bible 2016
ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನು ದೇವರ ಮಗನನ್ನು ಅಂಗೀಕರಿಸಿದ್ದಾನೋ ಅವನಿಗೆ ಆ ಜೀವ ಉಂಟು; ಯಾವನು ದೇವರ ಮಗನನ್ನು ಅಂಗೀಕರಿಸಲಿಲ್ಲವೋ ಅವನಿಗೆ ಆ ಜೀವವಿಲ್ಲ.
Kannada Bible (KNCL) BSI 2016
ಯಾರಲ್ಲಿ ದೇವರ ಪುತ್ರ ಇದ್ದಾನೋ ಅವನಲ್ಲಿ ಆ ಜೀವವಿರುತ್ತದೆ. ಯಾರಲ್ಲಿ ದೇವರ ಪುತ್ರನಿಲ್ಲವೋ ಅವನಲ್ಲಿ ಆ ಜೀವ ಇರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ.