1 John 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಮಗನಲ್ಲಿ ನಂಬಿಕೆಯಿಟ್ಟಿರುವ ನಿಮಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಈಗ ನಿಮಗೆ ನಿತ್ಯಜೀವವಿದೆ ಎಂಬುದು ನಿಮಗೆ ಗೊತ್ತಾಗುವಂತೆ ನಾನು ಈ ಪತ್ರ ಬರೆಯುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.
Kannada BSI Bible 2016
ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ನಿತ್ಯಜೀವ ಉಂಟೆಂದು ನಿಮಗೆ ಗೊತ್ತಾಗುವಂತೆ ಈ ಮಾತುಗಳನ್ನು ಬರೆದಿದ್ದೇನೆ.
Kannada Bible (KNCL) BSI 2016
ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ.