1 John 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ದೇವರನ್ನು ಬೇಡಿಕೊಂಡಾಗಲೆಲ್ಲಾ ಆತನು ನಮ್ಮ ಬೇಡಿಕೆಗಳನ್ನು ಕೇಳುವುದರಿಂದ ಆತನಲ್ಲಿ ಬೇಡಿಕೊಂಡದ್ದನ್ನು ಆತನು ನಮಗೆ ದಯಪಾಲಿಸುತ್ತಾನೆಂಬುದು ನಮಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
Kannada BSI Bible 2016
ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಬೇಡಿದವುಗಳು ಆತನಿಂದ ನಮಗೆ ದೊರೆತವೆಂಬದೂ ನಮಗೆ ಗೊತ್ತಾಗಿದೆ.
Kannada Bible (KNCL) BSI 2016
ನಾವು ಏನನ್ನು ಬೇಡಿಕೊಂಡರೂ ನಮ್ಮ ವಿಜ್ಞಾಪನೆಗೆ ದೇವರು ಕಿವಿಗೊಡುತ್ತಾರೆ ಎಂಬುದು ನಮಗೆ ತಿಳಿದಿದ್ದರೆ ನಾವು ಬೇಡಿದುದೆಲ್ಲವೂ ನಮಗೆ ಲಭಿಸಿದಂತೆಯೇ ಎಂಬುದೂ ನಮಗೆ ತಿಳಿದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.