1 John 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ದೇವರ ಮಕ್ಕಳನ್ನು ಪ್ರೀತಿಸುತ್ತಿದ್ದೇವೆಂಬುದು ನಮಗೆ ಹೇಗೆ ತಿಳಿದಿದೆ? ನಾವು ದೇವರನ್ನು ಪ್ರೀತಿಸುತ್ತಿರುವುದರಿಂದ ಮತ್ತು ಆತನ ಆಜ್ಞೆಗಳಿಗೆ ವಿಧೇಯರಾಗಿರುವುದರಿಂದ ದೇವರ ಆಜ್ಞೆಗಳು ನಮಗೆ ತಿಳಿದಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
Kannada BSI Bible 2016
ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ತಿಳಿದುಕೊಳ್ಳುತ್ತೇವೆ.
Kannada Bible (KNCL) BSI 2016
ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.