1 John 5:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
Kannada BSI Bible 2016
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.
Kannada Bible (KNCL) BSI 2016
ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.