1 John 5:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರನ್ನು ಪ್ರೀತಿಸುವುದು ಎಂದರೆ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದು. ದೇವರ ಆಜ್ಞೆಗಳು ನಮಗೆ ಕಠಿಣವಾದವುಗಳಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.
Kannada BSI Bible 2016
ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಮೇಲಣ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ. ಆತನ ಆಜ್ಞೆಗಳು ಭಾರವಾದವುಗಳಲ್ಲ.
Kannada Bible (KNCL) BSI 2016
ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.