1 John 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಂದಾತನೇ ಯೇಸು ಕ್ರಿಸ್ತನು. ಯೇಸು ನೀರಿನಿಂದ ಮಾತ್ರವಲ್ಲದೆ ರಕ್ತದಿಂದ ಬಂದನು. ಇದು ನಿಜವೆಂದು ನಮಗೆ ಆತ್ಮನು ತಿಳಿಸುತ್ತಾನೆ. ಏಕೆಂದರೆ ಆತ್ಮನು ಸತ್ಯಸ್ವರೂಪನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.
Kannada BSI Bible 2016
ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈತನು, ಅಂದರೆ ಯೇಸು ಕ್ರಿಸ್ತನು, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿಹೊಂದಿದವನು. ನೀರಿನಿಂದ ಮಾತ್ರವಲ್ಲ, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ.
Kannada Bible (KNCL) BSI 2016
ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.