1 John 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಸಾಕ್ಷಿ ಹೇಳಿದಾಗ ನಾವು ನಂಬುತ್ತೇವೆ. ಆದರೆ ದೇವರ ಸಾಕ್ಷಿಯು ಅದಕ್ಕಿಂತಲೂ ವಿಶೇಷವಾಗಿದೆ. ದೇವರು ತನ್ನ ಸ್ವಂತ ಮಗನ ಕುರಿತು ಹೇಳಿದ ಸತ್ಯವೇ ಆತನು ನಮಗೆ ನೀಡಿದ ಸಾಕ್ಷಿಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.
Kannada BSI Bible 2016
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುತ್ತೇವಲ್ಲಾ; ದೇವರ ಸಾಕ್ಷಿಯು ಅದಕ್ಕಿಂತ ವಿಶೇಷವಾಗಿದೆ. ದೇವರು ಕೊಟ್ಟ ಸಾಕ್ಷಿ ಏನಂದರೆ ಆತನು ತನ್ನ ಮಗನ ವಿಷಯದಲ್ಲಿ ಹೇಳಿದ್ದೇ.
Kannada Bible (KNCL) BSI 2016
ಮನುಷ್ಯರು ಕೊಡುವ ಸಾಕ್ಷ್ಯವನ್ನು ನಾವು ಅಂಗೀಕರಿಸುತ್ತೇವೆ. ದೇವರು ನೀಡುವ ಸಾಕ್ಷ್ಯ ಅದಕ್ಕಿಂತಲೂ ಶ್ರೇಷ್ಠವಾದುದು. ದೇವರ ಈ ಸಾಕ್ಷ್ಯ ಅವರ ಪುತ್ರನನ್ನು ಕುರಿತದ್ದಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವುದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಏಕೆಂದರೆ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.