1 Kings 1:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾತಾನನಿಗೆ ಇದು ತಿಳಿದಾಗ, ಅವನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಹೋಗಿ, “ಹಗ್ಗೀತಳ ಮಗನಾದ ಅದೋನೀಯನು ಮಾಡುತ್ತಿರುವುದನ್ನು ನೀನು ಕೇಳಿದೆಯಾ? ಅವನು ತನ್ನನ್ನು ತಾನೇ ರಾಜನನ್ನಾಗಿ ಮಾಡಿಕೊಂಡಿದ್ದಾನೆ ಮತ್ತು ನಮ್ಮ ಒಡೆಯನಾದ ರಾಜ ದಾವೀದನಿಗೆ ಇದು ತಿಳಿದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೇ ಅರಸನಾದನೆಂಬುದನ್ನು ನೀನು ಕೇಳಿದಿಯಲ್ಲವೋ?
Kannada BSI Bible 2016
ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ - ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೆ ಅರಸನಾದನೆಂಬದನ್ನು ನೀನು ಕೇಳಿದಿಯಲ್ಲವೋ?
Kannada Bible (KNCL) BSI 2016
ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗ ಅದೋನೀಯನು, ನಮ್ಮ ಒಡೆಯ ದಾವೀದರಿಗೆ ತಿಳಿಯದೆಯೇ ಅರಸನಾದನೆಂಬುದನ್ನು ನೀನು ಕೇಳಿರಬೇಕಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾತಾನನು ಸೊಲೊಮೋನನ ತಾಯಿ ಬತ್ಷೆಬೆಳಿಗೆ, “ನಮ್ಮ ಒಡೆಯ ದಾವೀದನು ಅರಿಯದಿರುವಾಗ, ಹಗ್ಗೀತಳ ಮಗ ಅದೋನೀಯನು ಅರಸನಾಗಿದ್ದಾನೆ, ಎಂದು ನೀನು ಕೇಳಲಿಲ್ಲವೋ?