1 Kings 1:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಬತ್ಷೆಬೆಳು ರಾಜನನ್ನು ನೋಡಲು ಅವನ ಮಲಗುವ ಕೊಠಡಿಗೆ ಹೋದಳು. ರಾಜನು ಬಹಳ ವೃದ್ಧನಾಗಿದ್ದನು. ಶೂನೇಮಿನ ಯುವತಿಯಾದ ಅಬೀಷಗಳು ಅಲ್ಲಿ ಅವನ ಆರೈಕೆಯನ್ನು ಮಾಡುತ್ತಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಬಹು ವೃದ್ಧನಾಗಿದುದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯಿಂದ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು.
Kannada BSI Bible 2016
ಆಗ ಬತ್ಷೆಬೆಳು ಕೊಠಡಿಯೊಳಗೆ ಅರಸನ ಬಳಿಗೆ ಹೋದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಬಹು ವೃದ್ಧನಾಗಿದ್ದದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು.
Kannada Bible (KNCL) BSI 2016
ಅರಸನು ಬಹಳ ಮುದುಕನಾಗಿದ್ದರಿಂದ, ಶೂನೇಮ್ಯಳಾದ ಅಬೀಷಗಳಿಂದ ಶುಶ್ರೂಷೆ ಪಡೆಯುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬತ್ಷೆಬೆಳು ಬಹು ವೃದ್ಧನಾಗಿದ್ದ ದಾವೀದನನ್ನು ನೋಡಲು ಅರಸನ ಕೊಠಡಿಯೊಳಗೆ ಹೋದಳು. ಅಲ್ಲಿ ಶೂನೇಮ್ಯಳಾದ ಅಬೀಷಗ್ ಅರಸನಿಗೆ ಸೇವೆಮಾಡುತ್ತಾ ಇದ್ದಳು.