1 Kings 1:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬತ್ಷೆಬೆಳು, “ನನ್ನ ಒಡೆಯನೇ, ನಿನ್ನ ದೇವರಾದ ಯೆಹೋವನ ಆಣೆಯಾಗಿ ನೀನು ನನಗೆ ಒಂದು ವಾಗ್ದಾನವನ್ನು ಮಾಡಿದ್ದೆ. ‘ನನ್ನ ನಂತರ ನಿನ್ನ ಮಗ ಸೊಲೊಮೋನನು ರಾಜನಾಗುವನು. ಸೊಲೊಮೋನನು ನನ್ನ ಸಿಂಹಾಸನದ ಮೇಲೆ ಕುಳಿತು ಆಳುವನು’ ಎಂಬುದೇ ಆ ಪ್ರಮಾಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಕೆಯು, “ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ ನನ್ನ ತರುವಾಯ ನನ್ನ ಮಗನಾದ ಸೊಲೊಮೋನನು ಅರಸನಾಗಬೇಕು. ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂಬುದಾಗಿ ಹೇಳಿದ್ದೆಯಲ್ಲಾ.
Kannada BSI Bible 2016
ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆಕೆಯು - ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತನ್ನ ದಾಸಿಯಾದ ನನಗೆ - ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಬೇಕು; ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು ಎಂಬದಾಗಿ ಹೇಳಿದನಲ್ಲಾ!
Kannada Bible (KNCL) BSI 2016
ಆಗ ಆಕೆ, “ನನ್ನ ಒಡೆಯರು ತಮ್ಮ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ, ‘ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಬೇಕು; ನಿಶ್ಚಯವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು,’ ಎಂಬುದಾಗಿ ಹೇಳಿದಿರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಅರಸನಿಗೆ, “ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ಮಗ ಸೊಲೊಮೋನನು ಆಳುವನೆಂದೂ, ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ, ನೀವು ನಿನ್ನ ದಾಸಿಗೆ ನಿನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದಿರಿ.