1 Kings 1:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೋನೀಯನು ಅನೇಕ ಹಸುಗಳನ್ನು, ಕೊಬ್ಬಿದ ಕರುಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದ್ದಾನೆ. ಅವನು ನಿನ್ನ ಎಲ್ಲಾ ಗಂಡುಮಕ್ಕಳನ್ನು ಆಹ್ವಾನಿಸಿದ್ದನು. ಅವನು ಯಾಜಕನಾದ ಎಬ್ಯಾತಾರನನ್ನು ಮತ್ತು ನಿನ್ನ ಸೇನಾಧಿಪತಿಯಾದ ಯೋವಾಬನನ್ನು ಆಹ್ವಾನಿಸಿದ್ದನು. ಆದರೆ ಅವನು ನಿನ್ನ ಸೇವೆಮಾಡುವ ನಿನ್ನ ಮಗನಾದ ಸೊಲೊಮೋನನನ್ನು ಆಹ್ವಾನಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ಯಾತಾರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.
Kannada BSI Bible 2016
ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜನಾಗಿ ಹೋರಿಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೇನಾಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.
Kannada Bible (KNCL) BSI 2016
ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ; ನಿಮ್ಮ ಸೇವಕ ಸೊಲೊಮೋನನನ್ನು ಬಿಟ್ಟು, ಎಲ್ಲಾ ರಾಜಪುತ್ರರನ್ನು, ಯಾಜಕ ಎಬ್ಯಾತಾರನನ್ನು ಹಾಗು ಸೇನಾಪತಿ ಯೋವಾಬನನ್ನು ಔತಣಕ್ಕೆ ಕರೆದಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಬಲಿಯಾಗಿ ಅರ್ಪಿಸಿದ್ದಾನೆ, ಅರಸನ ಮಕ್ಕಳೆಲ್ಲರನ್ನೂ, ಯಾಜಕನಾದ ಅಬಿಯಾತರನನ್ನೂ, ಸೇನಾಧಿಪತಿ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ. ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ.