1 Kings 1:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ರಾಜನೇ, ನಿನ್ನ ನಂತರ ಯಾರು ರಾಜನಾಗಬೇಕೆಂಬ ನಿನ್ನ ತೀರ್ಮಾನಕ್ಕಾಗಿ ಇಸ್ರೇಲರೆಲ್ಲರೂ ಕಾಯುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.
Kannada BSI Bible 2016
ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಒಡೆಯನೂ ಅರಸನೂ ಆದ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನೀನೇ ಗೊತ್ತುಮಾಡಬೇಕೆಂದು ಇಸ್ರಾಯೇಲ್ಯರೆಲ್ಲರೂ ಕಾದುಕೊಂಡಿರುತ್ತಾರೆ.
Kannada Bible (KNCL) BSI 2016
ನನ್ನ ಒಡೆಯರೂ ಅರಸರೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ತಾವೇ ಗೊತ್ತುಮಾಡಬೇಕೆಂದು ಇಸ್ರಯೇಲರೆಲ್ಲರು ಕುತೂಹಲದಿಂದ ಕಾದುಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅರಸನಾದ ನನ್ನ ಒಡೆಯನೇ, ನಿಮ್ಮ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನೀವು ಹೇಳುವ ಹಾಗೆ, ಸಮಸ್ತ ಇಸ್ರಾಯೇಲರ ಕಣ್ಣುಗಳು ನಿಮ್ಮ ಮೇಲೆ ಇರುತ್ತವೆ.