1 Kings 1:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾತಾನನು, “ನನ್ನ ರಾಜನೇ, ನನ್ನ ಒಡೆಯನೇ, ನಿನ್ನ ನಂತರ ಅದೋನೀಯನು ನೂತನ ರಾಜನಾಗಿ ಜನರನ್ನು ಆಳಲೆಂದು ನೀನು ತೀರ್ಮಾನಿಸಿ ಪ್ರಕಟಿಸಿರುವೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾತಾನನು, “ನನ್ನ ಒಡೆಯನೂ, ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವುದಕ್ಕೆ ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.
Kannada BSI Bible 2016
ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಒಡೆಯನೂ ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವದಕ್ಕೂ ನಿನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.
Kannada Bible (KNCL) BSI 2016
“ನನ್ನ ಒಡೆಯರೂ ಅರಸರೂ ಆದ ನೀವು ಅದೋನೀಯನಿಗೆ ಅರಸನಾಗುವುದಕ್ಕೂ ನಿಮ್ಮ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾತಾನನು, “ಅರಸನಾದ ನನ್ನ ಒಡೆಯನೇ, ಅದೋನೀಯನು, ನನ್ನ ತರುವಾಯ ಆಳುವನೆಂದೂ, ನನ್ನ ಸಿಂಹಾಸನ ಮೇಲೆ ಕುಳಿತುಕೊಳ್ಳುವನೆಂದೂ, ನೀವು ಹೇಳಿದ್ದು ಹೌದೋ?