1 Kings 1:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.
Kannada BSI Bible 2016
ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.
Kannada Bible (KNCL) BSI 2016
ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ.