1 Kings 1:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ರಾಜನೇ, ನಮಗೆ ಹೇಳದೆ ಇದನ್ನು ಮಾಡಿದೆಯಾ? ದಯವಿಟ್ಟು ಹೇಳು, ನಿನ್ನ ನಂತರ ರಾಜನಾಗುವವನು ಯಾರು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ” ಎಂದು ಹೇಳಿದನು.
Kannada BSI Bible 2016
ಅರಸನಾದ ನನ್ನ ಒಡೆಯನಿಂದ ಈ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ ಎಂದು ಹೇಳಿದನು.
Kannada Bible (KNCL) BSI 2016
ಈ ಕಾರ್ಯ ನಮ್ಮ ಒಡೆಯರೂ ಅರಸರೂ ಆದ ನಿಮ್ಮಿಂದಲೇ ನಡೆದಿರುವುದಾದರೆ, ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನಿಮ್ಮ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ?” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ನನ್ನ ಒಡೆಯನಿಂದ ಈ ಕಾರ್ಯವಾಯಿತೋ? ಅರಸನಾದ ನನ್ನ ಒಡೆಯನು, ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನಿಮ್ಮ ಸೇವಕನಾದ ನನಗೆ ನೀವು ತಿಳಿಸದೆ ಹೋದಿರೋ?” ಎಂದನು.