1 Kings 1:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಜನಾದ ದಾವೀದನು, “ಒಳಗೆ ಬರಲು ಬತ್ಷೆಬೆಳಿಗೆ ಹೇಳಿ!” ಎಂದು ಹೇಳಿದನು. ಬತ್ಷೆಬೆಳು ರಾಜನ ಎದುರಿಗೆ ಬಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಳು.
Kannada BSI Bible 2016
ಆಗ ಅರಸನಾದ ದಾವೀದನು ಪ್ರತ್ಯುತ್ತರವಾಗಿ--ಬತ್ಷೆ ಬೆಳನ್ನು ನನ್ನ ಬಳಿಗೆ ಕರೆ ಅಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಿರುವಾಗ ಅರಸನು--ನಿಶ್ಚಯವಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಾಗ ಅರಸನು ಆಕೆಗೆ -
Kannada Bible (KNCL) BSI 2016
ಅರಸ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆ ಬಂದು ಅರಸನ ಮುಂದೆ ನಿಂತಳು. ಅರಸ ಆಕೆಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ದಾವೀದನು ಉತ್ತರವಾಗಿ, “ಬತ್ಷೆಬೆಳನ್ನು ನನ್ನ ಬಳಿಗೆ ಕರೆಯಿರಿ,” ಎಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಳು.