1 Kings 1:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜನಾದ ದಾವೀದನು, “ಯಾಜಕನಾದ ಚಾದೋಕನಿಗೆ, ಪ್ರವಾದಿಯಾದ ನಾತಾನನಿಗೆ ಮತ್ತು ಯೆಹೋಯಾದಾವನ ಮಗನಾದ ಬೆನಾಯನಿಗೆ ಇಲ್ಲಿಗೆ ಬರಲು ಹೇಳು” ಎಂದು ಹೇಳಿದನು. ಈ ಮೂವರು ರಾಜನ ಬಳಿಗೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ, “ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನು ಕರೆಯಿರಿ” ಎಂದು ಆಜ್ಞಾಪಿಸಿದನು. ಅವರು ಅರಸನ ಸನ್ನಿಧಿಗೆ ಬಂದರು.
Kannada BSI Bible 2016
ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ - ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನು ಕರೆಯಿರಿ ಎಂದು ಆಜ್ಞಾಪಿಸಿದನು;
Kannada Bible (KNCL) BSI 2016
ಅನಂತರ ಅರಸ ದಾವೀದನು ತನ್ನ ಸೇವಕರಿಗೆ, “ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನು ಕರೆಯಿರಿ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ದಾವೀದನು, “ಯಾಜಕನಾದ ಚಾದೋಕನನ್ನೂ, ಪ್ರವಾದಿಯಾದ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ,” ಎಂದನು. ಅವರು ಅರಸನ ಸಮ್ಮುಖಕ್ಕೆ ಬಂದರು.