1 Kings 1:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.
Kannada BSI Bible 2016
ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು.
Kannada Bible (KNCL) BSI 2016
ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ, ಯೆಹೋಯಾದಾವನ ಮಗ ಬೆನಾಯನೂ, ಕೆರೇತ್ಯರೂ, ಪೆಲೇತ್ಯರೂ ಹೋಗಿ, ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನಿಗೆ ಕರೆತಂದರು.