1 Kings 1:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನಾದ ಚಾದೋಕನು ಪವಿತ್ರಗುಡಾರದಿಂದ ಎಣ್ಣೆಯನ್ನು ತೆಗೆದುಕೊಂಡು ಬಂದನು. ಸೊಲೊಮೋನನು ರಾಜನೆಂದು ತೋರಿಸಲು ಅವನ ತಲೆಯ ಮೇಲೆ ಚಾದೋಕನು ಎಣ್ಣೆಯನ್ನು ಸುರಿದನು. ದಾವೀದನ ಜನರು ತುತ್ತೂರಿಯನ್ನು ಊದಿದರು. ಆಗ ಎಲ್ಲಾ ಜನರೂ, “ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.
Kannada BSI Bible 2016
ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿರುವ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದಿ ಎಲ್ಲಾ ಜನರು - ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.
Kannada Bible (KNCL) BSI 2016
ಯಾಜಕ ಚಾದೋಕನು ದೇವದರ್ಶನದ ಗುಡಾರದಲ್ಲಿದ್ದ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದುತ್ತಾ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ!” ಎಂದು ಘೋಷಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು.