1 Kings 1:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯಕ್ಕೆ ಅದೋನೀಯನು ಮತ್ತು ಅವನೊಂದಿಗಿದ್ದ ಅತಿಥಿಗಳು ಊಟವನ್ನು ಮುಗಿಸುತ್ತಿದ್ದರು. ಅವರಿಗೆ ತುತ್ತೂರಿಯ ಶಬ್ದವು ಕೇಳಿಸಿತು. ಯೋವಾಬನು, “ಆ ಶಬ್ದವು ಏನು? ನಗರದಲ್ಲಿ ಏನು ನಡೆಯುತ್ತಿದೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೋನೀಯನು ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸಿದನು.
Kannada BSI Bible 2016
ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ತೀರಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ - ಪಟ್ಟಣದಲ್ಲಿ ಇಂಥ ಗದ್ದಲವೇಕೆ ಎಂದು ವಿಚಾರಿಸುವಾಗಲೇ
Kannada Bible (KNCL) BSI 2016
ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಆರ್ಭಟ ಕೇಳಿಸಿತು. ಕೊಂಬಿನ ಧ್ವನಿ ಕೇಳಿದಾಗ ಯೋವಾಬನು, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸುತ್ತಿರುವಾಗಲೇ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅದೋನೀಯನೂ, ಅವನ ಸಂಗಡ ಕರೆಹೊಂದಿದವರೂ ತಿಂದು, ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ, “ಪಟ್ಟಣದಲ್ಲಿ ಗದ್ದಲದ ಶಬ್ದವೇಕೆ?” ಎಂದನು.