1 Kings 1:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಬನು ಮಾತನಾಡುತ್ತಿದ್ದಂತೆ, ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು, “ಇಲ್ಲಿಗೆ ಬಾ! ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ನೀನು ನನಗೆ ಶುಭ ಸಮಾಚಾರವನ್ನೇ ತಂದಿರುವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ, “ಬಾ ನೀನು ಯೋಗ್ಯ ಪುರುಷನೂ, ಶುಭವರ್ತಮಾನವನ್ನು ತರುವವನೂ ಆಗಿರುತ್ತೀ” ಎಂದನು.
Kannada BSI Bible 2016
ಅವನು ಇನ್ನೂ ಮಾತನಾಡು ತ್ತಿರುವಾಗ ಇಗೋ, ಯಾಜಕನಾಗಿರುವ ಎಬ್ಯಾತಾರನ ಮಗನಾದ ಯೋನಾತಾನನು ಬಂದನು. ಅದೋನೀ ಯನು ಅವನಿಗೆ--ಒಳಗೆ ಬಾ; ಯಾಕಂದರೆ ನೀನು ಪರಾಕ್ರಮಶಾಲಿ, ಒಳ್ಳೇ ವರ್ತಮಾನವನ್ನು ತರುತ್ತೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನಾದ ಎಬ್ಯಾತಾರನ ಮಗ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ - ಬಾ, ನೀನು ಯೋಗ್ಯಪುರುಷನೂ ಶುಭವರ್ತಮಾನತರುವವನೂ ಆಗಿರುತ್ತೀ ಅಂದನು.
Kannada Bible (KNCL) BSI 2016
ಯಾಜಕ ಎಬ್ಯಾತಾರನ ಮಗ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ, “ನಿನ್ನಂಥ ಯೋಗ್ಯಪುರುಷ ಶುಭಸಮಾಚಾರವನ್ನೇ ತಂದಿರಬೇಕು, ಒಳಗೆ ಬಾ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಇನ್ನೂ ಮಾತನಾಡುತ್ತಿರುವಾಗ, ಯಾಜಕನಾಗಿರುವ ಅಬಿಯಾತರನ ಮಗ ಯೋನಾತಾನನು ಬಂದನು. ಅದೋನೀಯನು ಅವನಿಗೆ, “ಒಳಗೆ ಬಾ. ಏಕೆಂದರೆ ನೀನು ಯೋಗ್ಯ ಮನುಷ್ಯನೂ, ಒಳ್ಳೆಯ ಸಮಾಚಾರ ತರುವವನೂ ಆಗಿರುತ್ತೀ?” ಎಂದನು.