1 Kings 1:51 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯಾರೋ ಒಬ್ಬರು ಸೊಲೊಮೋನನಿಗೆ, “ಅದೋನೀಯನು ನಿನಗೆ ಬಹಳವಾಗಿ ಹೆದರಿಕೊಂಡು ಪವಿತ್ರಗುಡಾರದ ಯಜ್ಞವೇದಿಕೆಯ ಬಳಿಗೆ ಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಬಿಡದೆ ಹಿಡಿದುಕೊಂಡೇ ಇದ್ದಾನೆ, ‘ನನ್ನನ್ನು ಕೊಲ್ಲುವುದಿಲ್ಲವೆಂದು ಪ್ರಮಾಣ ಮಾಡುವಂತೆ ರಾಜನಾದ ಸೊಲೊಮೋನನಿಗೆ ತಿಳಿಸಿ’ ಎಂಬುದಾಗಿ ಅದೋನೀಯನು ಕೇಳಿಕೊಳ್ಳುತ್ತಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೂತರು ಬಂದು ಸೊಲೊಮೋನನಿಗೆ, “ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂಬುದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ’” ಎಂಬುದಾಗಿ ತಿಳಿಸಿದನು.
Kannada BSI Bible 2016
ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೂತರು ಬಂದು ಸೊಲೊಮೋನನಿಗೆ - ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು - ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವದಿಲ್ಲವೆಂಬದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತಾನೆ ಎಂಬದನ್ನು ತಿಳಿಸಿದಾಗ
Kannada Bible (KNCL) BSI 2016
ದೂತರು ಬಂದು ಸೊಲೊಮೋನನಿಗೆ, “ಅದೋನೀಯನು ನಿನಗೆ ಹೆದರಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡಿದ್ದಾನೆ. ಅರಸ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂದು ಈ ದಿನ ನನಗೆ ಪ್ರಮಾಣ ಮಾಡಬೇಕೆಂದು ಬೇಡಿಕೊಳ್ಳುತ್ತಾನೆ,” ಎಂದು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಒಬ್ಬನು ಅರಸನಾದ ಸೊಲೊಮೋನನಿಗೆ, “ಅದೋನೀಯನು, ನಿನಗೆ ಭಯಪಡುತ್ತಾನೆ. ಏಕೆಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ಖಡ್ಗದಿಂದ ತನ್ನ ಸೇವಕನನ್ನು ಕೊಲ್ಲುವುದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ,’ ಎಂದು ಹೇಳುತ್ತಾನೆ,” ಎಂದನು.