1 Kings 1:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಸೊಲೊಮೋನನು ಅದೋನೀಯನನ್ನು ಕರೆತರಲು ಕೆಲವು ಜನರನ್ನು ಕಳುಹಿಸಿದನು. ಅವರು ಅದೋನೀಯನನ್ನು ರಾಜನಾದ ಸೊಲೊಮೋನನ ಬಳಿಗೆ ಕರೆದುತಂದರು. ಅದೋನೀಯನು ರಾಜನಾದ ಸೊಲೊಮೋನನ ಬಳಿಗೆ ಬಂದು, ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು, “ಮನೆಗೆ ಹೋಗು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಅವನ ಮನೆಗೆ ಹೋಗಲು ಅಪ್ಪಣೆಕೊಟ್ಟನು.
Kannada BSI Bible 2016
ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ತರಿಸಿದನು. ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಮನೆಗೆ ಹೋಗ ಅಪ್ಪಣೆಕೊಟ್ಟನು.
Kannada Bible (KNCL) BSI 2016
ಆಳುಗಳನ್ನು ಕಳುಹಿಸಿ ಅವನನ್ನು ಬಲಿಪೀಠದ ಬಳಿಯಿಂದ ಕರೆದುತರುವಂತೆ ಮಾಡಿದನು. ಅವನು ಬಂದು, ಅರಸ ಸೊಲೊಮೋನನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಮನೆಗೆ ಹೋಗಲು ಅಪ್ಪಣೆಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಸೊಲೊಮೋನನು ಅವನನ್ನು ಕರೆಸಿದಾಗ, ಬಲಿಪೀಠದ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡಬಿದ್ದನು. ಸೊಲೊಮೋನನು ಅವನಿಗೆ, “ನಿನ್ನ ಮನೆಗೆ ಹೋಗು,” ಎಂದನು.