1 Kings 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.
Kannada BSI Bible 2016
ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಚೆರೂಯಳ ಮಗನಾದ ಯೋವಾಬನನ್ನೂ ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನಿಗೆ ಸಹಾಯಕರಾದರು.
Kannada Bible (KNCL) BSI 2016
ಜೆರೂಯಳ ಮಗ ಯೋವಾಬನನ್ನೂ ಯಾಜಕ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡಿದ್ದನು. ಇವರು ಅವನಿಗೆ ಬೆಂಬಲ ವ್ಯಕ್ತಪಡಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು.