1 Kings 10:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ಮರವನ್ನು ಆಲಯದ ಮತ್ತು ಅರಮನೆಯ ಆಧಾರಕಂಬಗಳಿಗಾಗಿ ಬಳಸಿದನು. ಅವನು ಹಾಡುಗಾರರಿಗೆ ಬೇಕಾದ ಹಾರ್ಪ್ ವಾದ್ಯಗಳನ್ನು ಮತ್ತು ಲೈರ್ ವಾದ್ಯಗಳನ್ನು ತಯಾರಿಸಲು ಆ ಮರವನ್ನು ಉಪಯೋಗಿಸಿದನು. ಹಿಂದೆಂದೂ ಯಾವ ವ್ಯಕ್ತಿಯೂ ಅಂತಹ ಮರವನ್ನು ಇಸ್ರೇಲಿಗೆ ತಂದಿರಲಿಲ್ಲ ಮತ್ತು ಅಲ್ಲಿಯವರೆಗೆ ಇಸ್ರೇಲಿನ ಯಾವ ವ್ಯಕ್ತಿಯೂ ಅಂತಹ ಮರವನ್ನು ನೋಡಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಸುಗಂಧದ ಮರದಿಂದ ಯೆಹೋವನ ಆಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ಆ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ.
Kannada BSI Bible 2016
ಅರಸನು ಅಲ್ಮುಗ್ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಸುಗಂಧದ ಮರದಿಂದ ದೇವಾಲಯ, ಅರಮನೆ ಇವುಗಳಿಗೆ ಕಟಕಟೆಗಳನ್ನೂ ಗಾಯಕರಿಗೋಸ್ಕರ ಕಿನ್ನರಿಗಳನ್ನೂ ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನವರೆಗೂ ಬರಲಿಲ್ಲ, ಮತ್ತು ಕಾಣಲಿಲ್ಲ.
Kannada Bible (KNCL) BSI 2016
ಅರಸನು ಸುಗಂಧದ ಮರದಿಂದ ದೇವಾಲಯಕ್ಕೆ ಹಾಗು ಅರಮನೆಗಳಿಗೆ ಮೆಟ್ಟಲುಗಳನ್ನು ವಾದ್ಯಗಾರರಿಗಾಗಿ ಕಿನ್ನರಿಗಳನ್ನು ಹಾಗು ಸ್ವರಮಂಡಲಗಳನ್ನು ಮಾಡಿಸಿದನು. ಆಗ ಬಂದಷ್ಟು ಸುಗಂಧದಮರ ಇಂದಿನವರೆಗೂ ಬರಲಿಲ್ಲ, ಮತ್ತು ಯಾರೂ ಅಷ್ಟನ್ನು ಕಾಣಲೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ ಅರಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ, ವೀಣೆಗಳನ್ನೂ ಮಾಡಿಸಿದನು. ಅಂದಿನಿಂದ ಈ ದಿನದವರೆಗೂ ಅಂಥಾ ಸುಗಂಧದ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.