1 Kings 10:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜನಾದ ಸೊಲೊಮೋನನು ಇತರ ದೇಶದ ರಾಜರಿಗೆ ಮರ್ಯಾದೆಗಾಗಿ ನೀಡುವ ಕಾಣಿಕೆಗಳನ್ನು ಶೆಬದ ರಾಣಿಗೂ ಕೊಟ್ಟನು. ಆಕೆಯು ಕೇಳಿದ್ದೆಲ್ಲವನ್ನೂ ಅವನು ನೀಡಿದನು. ಅನಂತರ ರಾಣಿಯು ಸೇವಕರೊಡನೆ ತನ್ನ ದೇಶಕ್ಕೆ ಹಿಂದಿರುಗಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಸೊಲೊಮೋನನು ಶೆಬೆದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳೆಲ್ಲವನ್ನು ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.
Kannada BSI Bible 2016
ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಸೊಲೊಮೋನನು ಶೆಬದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.
Kannada Bible (KNCL) BSI 2016
ಅರಸ ಸೊಲೊಮೋನನು ಶೆಬದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ, ಆಕೆ ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆ ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಸೊಲೊಮೋನನು ಶೆಬದ ರಾಣಿಗೆ ಔದಾರ್ಯವಾಗಿ ಕೊಟ್ಟ ಕಾಣಿಕೆಗಳ ಹೊರತಾಗಿ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.