1 Kings 10:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಸೇವಕರ ದೊಡ್ಡ ಗುಂಪಿನೊಡನೆ ಜೆರುಸಲೇಮಿಗೆ ಬಂದಳು. ಅನೇಕ ಒಂಟೆಗಳ ಮೇಲೆ ಸಾಂಬಾರ ಪದಾರ್ಥಗಳನ್ನು, ಮುತ್ತುಗಳನ್ನು ಮತ್ತು ಬಹಳ ಬಂಗಾರವನ್ನು ಹೇರಿಸಿಕೊಂಡು ಬಂದಳು. ಅವಳು ಸೊಲೊಮೋನನನ್ನು ಸಂಧಿಸಿ, ತನ್ನ ಮನಸ್ಸಿನಲ್ಲಿದ್ದ ಎಲ್ಲ ಪ್ರಶ್ನೆಗಳನ್ನು ಅವನಿಗೆ ಕೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
Kannada BSI Bible 2016
ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಸುಗಂಧದ್ರವ್ಯ, ಅಪರಿವಿುತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಯೆರೂಸಲೇವಿುಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
Kannada Bible (KNCL) BSI 2016
ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.