1 Kings 10:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಸೊಲೊಮೋನನ ಹತ್ತಿರ ಅನೇಕ ಸರಕು ಸಾಗಣಿಕೆಯ ಹಡಗುಗಳಿದ್ದವು. ಅವನು ಅವುಗಳನ್ನು ಇತರ ದೇಶಗಳಲ್ಲಿನ ವ್ಯಾಪಾರಕ್ಕಾಗಿ ಕಳುಹಿಸುತ್ತಿದ್ದನು. ಇವು ಹೀರಾಮನ ಹಡಗುಗಳು. ಈ ಹಡಗುಗಳು ಬಂಗಾರ, ಬೆಳ್ಳಿ, ದಂತ ಮತ್ತು ಪ್ರಾಣಿಗಳನ್ನು ಹೊಸದಾಗಿ ತುಂಬಿಕೊಂಡು ಮೂರು ವರ್ಷಕ್ಕೊಮ್ಮೆ ಹಿಂದಿರುಗುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.
Kannada BSI Bible 2016
ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.
Kannada Bible (KNCL) BSI 2016
ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀರಾಮನ ಹಡಗುಗಳ ಜೊತೆಯಲ್ಲಿ ಅರಸನ ಹಡಗುಗಳು ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.