1 Kings 10:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ಇಸ್ರೇಲನ್ನು ಬಹಳ ಶ್ರೀಮಂತವಾಗಿರಿಸಿದನು. ಜೆರುಸಲೇಮಿನಲ್ಲಿ ಬೆಳ್ಳಿಯು ಕಲ್ಲುಗಳಂತೆಯೂ ದೇವದಾರುಮರಗಳು ಬೆಟ್ಟದ ಮೇಲೆ ಬೆಳೆಯುವ ಅನೇಕ ಅಂಜೂರದ ಗಿಡಗಳಂತೆಯೂ ಹೇರಳವಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.
Kannada BSI Bible 2016
ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಯು ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.
Kannada Bible (KNCL) BSI 2016
ಅವನ ಕಾಲದಲ್ಲಿ ಜೆರುಸಲೇಮಿನಲ್ಲಿದ್ದ ಬೆಳ್ಳಿಯು ಕಲ್ಲಿನಂತೆ ಹಾಗು ದೇವದಾರು ಮರಗಳು ಇಳಕಲ್ಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆ ವಿಪುಲವಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.