1 Kings 10:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ಈಜಿಪ್ಟ್ ಮತ್ತು ಕ್ಯೂ ಪ್ರದೇಶಗಳಿಂದ ಕುದುರೆಗಳನ್ನು ಖರೀದಿಸಿ ಆಮದು ಮಾಡಿಕೊಂಡನು. ಅವನ ವ್ಯಾಪಾರಿಗಳು ಅವುಗಳನ್ನು ಕ್ಯೂ ಪ್ರಾಂತ್ಯದಿಂದ ಇಸ್ರೇಲಿಗೆ ತರುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.
Kannada BSI Bible 2016
ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.
Kannada Bible (KNCL) BSI 2016
ಅರಸ ಸೊಲೊಮೋನನ ಕುದುರೆಗಳು ಈಜಿಪ್ಟ್ ದೇಶದವುಗಳು; ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಕುವೆಯಿಂದಲೂ ಕುದುರೆಗಳು ಬರುತ್ತಿದ್ದವು. ಅರಸನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.