1 Kings 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನೇ ಬಂದು, ನನ್ನ ಸ್ವಂತ ಕಣ್ಣುಗಳಿಂದ ಆ ಸಂಗತಿಗಳನ್ನು ನೋಡುವವರೆಗೆ ನಾನು ನಂಬಲೇ ಇಲ್ಲ. ಆದರೆ ನಾನು ಕೇಳಿದುದಕ್ಕಿಂತಲೂ ಮಹತ್ವವಾದ ಸಂಗತಿಗಳನ್ನು ಈಗ ನೋಡುತ್ತಿದ್ದೇನೆ. ಜನರು ಹೇಳಿದುದಕ್ಕಿಂತ ಅತ್ಯಂತ ಹೆಚ್ಚಿನ ಜ್ಞಾನವೂ ಐಶ್ವರ್ಯವೂ ನಿನ್ನಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.
Kannada BSI Bible 2016
ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನ ವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.
Kannada Bible (KNCL) BSI 2016
ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಿನ್ನ ಜ್ಞಾನವೂ, ನಿನ್ನ ಸಂಪತ್ತೂ ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.