1 Kings 11:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸಿದನು! ಅವನು ಇಸ್ರೇಲರಲ್ಲದ ಅನೇಕ ಸ್ತ್ರೀಯರನ್ನು ಪ್ರೀತಿಸಿದನು. ಇವರಲ್ಲಿ ಫರೋಹನ ಮಗಳು, ಮೋವಾಬ್ಯ, ಅಮ್ಮೋನಿಯ, ಎದೋಮ್ಯ ಚೀದೋನ್ಯ ಮತ್ತು ಹಿತ್ತಿಯ ಸ್ತ್ರೀಯರು ಸೇರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು.
Kannada BSI Bible 2016
ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಸ್ತ್ರೀಯರನ್ನೂ ಮೋಹಿಸಿದನು.
Kannada Bible (KNCL) BSI 2016
ಅರಸ ಸೊಲೊಮೋನನು ಫರೋಹನ ಮಗಳನ್ನಲ್ಲದೆ, ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಮಹಿಳೆಯರನ್ನೂ ಮೋಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರ, ಅಮ್ಮೋನ್ಯರ, ಎದೋಮ್ಯರ, ಸೀದೋನ್ಯರ, ಹಿತ್ತಿಯರ ಸ್ತ್ರೀಯರನ್ನೂ ಪ್ರೀತಿಮಾಡಿದನು.