1 Kings 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಹೀಗೆ ಸಂಭವಿಸಿತು: ದಾವೀದನು ಮೊದಲು ಎದೋಮ್ಯರನ್ನು ಸೋಲಿಸಿದ್ದನು, ದಾವೀದನ ಸೈನ್ಯಕ್ಕೆ ಯೋವಾಬನು ಸೇನಾಪತಿಯಾಗಿದ್ದನು. ಸತ್ತ ಜನರನ್ನು ಸಮಾಧಿ ಮಾಡಲು ಯೋವಾಬನು ಎದೋಮಿಗೆ ಹೋದನು. ಅಲ್ಲಿ ಇನ್ನೂ ವಾಸವಾಗಿದ್ದ ಗಂಡಸರನ್ನೆಲ್ಲ ಯೋವಾಬನು ಕೊಂದುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನಿಗೂ ಎದೋಮಿನವರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ, ಹತರಾದ ಇಸ್ರಾಯೇಲರನ್ನು ಸಮಾಧಿಮಾಡಿದನು.
Kannada BSI Bible 2016
ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನಿಗೂ ಎದೋಮ್ಯರಿಗೂ ಯುದ್ಧನಡಿಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಾಯೇಲ್ಯರನ್ನು ಹೂಣಿಟ್ಟು
Kannada Bible (KNCL) BSI 2016
ದಾವೀದನಿಗೂ ಎದೋಮ್ಯರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಯೇಲರನ್ನು ಸಮಾಧಿಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಎದೋಮಿನಲ್ಲಿರುವಾಗ ಸೇನಾಧಿಪತಿಯಾದ ಯೋವಾಬನು ಎದೋಮಿನ ಗಂಡಸರೆಲ್ಲರನ್ನು ಕೊಂದುಹಾಕಿದನು. ತರುವಾಯ ಇಸ್ರಾಯೇಲರಲ್ಲಿ ಹತರಾದವರನ್ನು ಸಮಾಧಿಮಾಡಲು ಹೋದನು.