1 Kings 11:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೊದಲೇ ಇಸ್ರೇಲಿನ ಜನರಿಗೆ, “ಅನ್ಯದೇಶದ ಸ್ತ್ರೀಯರನ್ನು ನೀವು ಮದುವೆಯಾಗಲೇಬಾರದು. ನೀವು ಅವರನ್ನು ಮದುವೆಯಾದರೆ, ತಮ್ಮ ದೇವರುಗಳನ್ನು ಅನುಸರಿಸುವಂತೆ ಅವರು ನಿಮ್ಮನ್ನು ಪ್ರೇರೇಪಿಸುತ್ತಾರೆ” ಎಂದು ಹೇಳಿದ್ದನು. ಆದರೆ ಸೊಲೊಮೋನನು ಈ ಸ್ತ್ರೀಯರನ್ನು ಪ್ರೀತಿಸತೊಡಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲರಿಗೆ, “ನಿಮಗೂ ಅವರಿಗೂ ಕೊಡುವುದು ತೆಗೆದುಕೊಳ್ಳುವುದು ನಡೆಯಬಾರದು, ಅದು ನಡೆಯುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು” ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು.
Kannada BSI Bible 2016
ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲ್ಯರಿಗೆ - ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ನಡೆಯಬಾರದು; ಅದು ನಡೆಯುವದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು.
Kannada Bible (KNCL) BSI 2016
ಸರ್ವೇಶ್ವರ ಈ ಜನಾಂಗಗಳ ವಿಷಯದಲ್ಲಿ ಇಸ್ರಯೇಲರಿಗೆ, “ನಿಮಗೂ ಅವರಿಗೂ ಕೊಟ್ಟುಕೊಳ್ಳುವ ಸಂಬಂಧ ಇರಕೂಡದು; ಹೀಗೆ ವಿವಾಹ ಸಂಬಂಧವಾಗುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಬಹುದು,” ಎಂದು ಎಚ್ಚರಿಸಿದ್ದರು. ಆದರೂ ಸೊಲೊಮೋನನು ಅವರ ಮಹಿಳೆಯರಲ್ಲಿ ಅನುರಕ್ತನಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಜನಾಂಗಗಳನ್ನು ಕುರಿತು ಯೆಹೋವ ದೇವರು ಇಸ್ರಾಯೇಲರಿಗೆ, “ನೀವು ಅವರ ಬಳಿಗೆ ಪ್ರವೇಶಿಸಬಾರದು. ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು,” ಎಂದು ಹೇಳಿದ್ದರು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.