1 Kings 11:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಖ್ಪೆನೇಸಳ ಸೋದರಿಯನ್ನು ಹದದನು ಮದುವೆಯಾದನು. ಅವರಿಗೆ ಗೆನುಬತ್ ಎಂಬ ಹೆಸರಿನ ಮಗನಿದ್ದನು. ಫರೋಹನ ಮನೆಯಲ್ಲಿಯೇ ಅವನ ಮಕ್ಕಳೊಂದಿಗೆ ಗೆನುಬತನೂ ಬೆಳೆಯಲು ರಾಣಿಯಾದ ತಖ್ಪೆನೇಸಳು ಅವಕಾಶಮಾಡಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯಲ್ಲಿ ಅವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೆಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು. ಅಲ್ಲಿ ಅವನು ಫರೋಹನ ಕುಮಾರರ ಜೊತೆಯಲ್ಲಿದ್ದನು.
Kannada BSI Bible 2016
ತಖ್ಪೆನೇಸ್ ಸಹೋದರಿಯು ಅವನಿಗೆ ಗೆನುಬ ತನೆಂಬ ಮಗನನ್ನು ಹೆತ್ತಳು. ತಖ್ಪೆನೇಸ್ ಇವನನ್ನು ಫರೋಹನ ಮನೆಯಲ್ಲಿ ಮೊಲೆ ಬಿಡಿಸಿದಳು. ಗೆನುಬತನು ಫರೋಹನ ಮನೆಯಲ್ಲಿ ಅವನ ಮಕ್ಕಳ ಸಂಗಡ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯಲ್ಲಿ ಇವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಬೆನೇಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು; ಅಲ್ಲಿ ಇವನು ಫರೋಹನ ಕುಮಾರರ ಜೊತೆಯಲ್ಲಿದ್ದನು.
Kannada Bible (KNCL) BSI 2016
ಆಕೆಯಲ್ಲಿ ಇವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೇಸಳು ಆ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು; ಅಲ್ಲಿ ಇವನು ಫರೋಹನ ಕುಮಾರರ ಜೊತೆಯಲ್ಲಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಪ್ನೆಸ್ ಸಹೋದರಿಯು ಅವನಿಗೆ ಗೆನುಬತ್ ಎಂಬ ಮಗನನ್ನು ಹೆತ್ತಳು. ತಪ್ನೆಸ್ ಇವನನ್ನು ಫರೋಹನ ಮನೆಯಲ್ಲಿ ಬೆಳೆಸಿದಳು. ಗೆನುಬತನು ಫರೋಹನ ಮನೆಯಲ್ಲಿ ಫರೋಹನ ಮಕ್ಕಳ ಸಂಗಡ ಇದ್ದನು.