1 Kings 11:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಸತ್ತುಹೋದನೆಂಬುದು ಹದದನಿಗೆ ಈಜಿಪ್ಟಿನಲ್ಲಿ ತಿಳಿಯಿತು. ಸೈನ್ಯದ ಸೇನಾಪತಿಯಾದ ಯೋವಾಬನು ಸತ್ತನೆಂಬುದೂ ಅವನಿಗೆ ತಿಳಿಯಿತು. ಆದ್ದರಿಂದ ಹದದನು ಫರೋಹನಿಗೆ, “ಸ್ವದೇಶದ ನನ್ನ ಮನೆಗೆ ನನಗೆ ಹೋಗಲು ಬಿಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಪೂರ್ವಿಕರ ಬಳಿಗೆ ಸೇರಿದನೆಂದೂ ಸೇನಾಧಿಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನನಿಗೆ, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ, ನನಗೆ ಅಪ್ಪಣೆ ಕೊಡು” ಅಂದನು.
Kannada BSI Bible 2016
ಆದರೆ ದಾವೀದನು ತನ್ನ ಪಿತೃಗಳ ಸಂಗಡ ಮಲಗಿದ್ದಾನೆಂದೂ ಸೈನ್ಯಾಧಿಪತಿಯಾದ ಯೋವಾಬನು ಸತ್ತುಹೋದನೆಂದೂ ಹದದನು ಐಗುಪ್ತದಲ್ಲಿ ಕೇಳಿ ಫರೋಹನಿಗೆ--ನಾನು ನನ್ನ ದೇಶಕ್ಕೆ ಹೋಗುವ ಹಾಗೆ ನನ್ನನ್ನು ಕಳುಹಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನಿಗೆ - ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ನನಗೆ ಅಪ್ಪಣೆಕೊಡು ಅಂದನು.
Kannada Bible (KNCL) BSI 2016
ದಾವೀದನು ಸತ್ತು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಈಜಿಪ್ಟಿನಲ್ಲಿದ್ದ ಹದದನು ಕೇಳಿದನು. ಫರೋಹನಿಗೆ ಅವನು, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ಅಪ್ಪಣೆಕೊಡಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದಾವೀದನು ಮರಣ ಹೊಂದಿದನೆಂದೂ, ಸೇನಾಧಿಪತಿಯಾದ ಯೋವಾಬನು ಸತ್ತು ಹೋದನೆಂದೂ, ಹದದನು ಈಜಿಪ್ಟಿನಲ್ಲಿ ಕೇಳಿದಾಗ, ಹದದನು ಫರೋಹನಿಗೆ, “ನಾನು ನನ್ನ ದೇಶಕ್ಕೆ ಹೋಗುವಹಾಗೆ ನನ್ನನ್ನು ಕಳುಹಿಸು,” ಎಂದನು.