1 Kings 11:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಚೋಬದ ಸೈನ್ಯವನ್ನು ಸೋಲಿಸಿದ ಬಳಿಕ, ರೆಜೋನನು ಕೆಲವು ಜನರನ್ನು ಒಟ್ಟುಗೂಡಿಸಿಕೊಂಡು, ಆ ಕಿರುಸೇನೆಗೆ ತಾನೇ ನಾಯಕನಾದನು. ರೆಜೋನನು ದಮಸ್ಕಕ್ಕೆ ಹೋಗಿ ಅಲ್ಲಿಯೇ ನೆಲೆಸಿದನು. ರೆಜೋನನು ದಮಸ್ಕದ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಚೋಬದವರನ್ನು ಸಂಹರಿಸಿದಾಗ ಅವನು ಚೋಬದ ಅರಸನೂ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಜನರನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.
Kannada BSI Bible 2016
ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಚೋಬದವರನ್ನು ಸಂಹರಿಸಿದಾಗ ಇವನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಮಂದಿಯನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.
Kannada Bible (KNCL) BSI 2016
ದಾವೀದನು ಚೋಬದವರನ್ನು ಸಂಹರಿಸಿದಾಗ ಈ ರೆಜೋನನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ, ಕೆಲವು ಮಂದಿಯನ್ನು ಕೂಡಿಸಿಕೊಂಡು, ತಾನು ಅವರ ನಾಯಕನಾಗಿ, ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಜನರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾಗಿ ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ, ಅರಸನಾದನು.