1 Kings 11:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನ ಸೇವಕರಲ್ಲಿ ನೆಬಾಟನ ಮಗನಾದ ಯಾರೊಬ್ಬಾಮನೂ ಒಬ್ಬನಾಗಿದ್ದನು. ಯಾರೊಬ್ಬಾಮನು ಎಫ್ರಾಯೀಮ್ ಕುಲದವನು, ಅವನು ಚರೇದ ಪಟ್ಟಣದವನು. ಯಾರೊಬ್ಬಾಮನ ತಾಯಿಯ ಹೆಸರು ಜೆರೂಗ, ಆಕೆ ವಿಧವೆಯಾಗಿದ್ದಳು. ಯಾರೊಬ್ಬಾಮನು ರಾಜನ ವಿರುದ್ಧ ತಿರುಗಿಬಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಸೊಲೊಮೋನನಿಗೆ ವಿರುದ್ಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನೆಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆಯು ಅವನ ತಾಯಿ.
Kannada BSI Bible 2016
ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಸೊಲೊಮೋನನಿಗೆ ವಿರೋಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನೂ ಆಗಿದ್ದ ಯಾರೊಬ್ಬಾಮನೆಂಬವನು ಮತ್ತೊಬ್ಬನು; ಚೆರೂಗಳೆಂಬ ವಿಧವೆಯು ಅವನ ತಾಯಿ.
Kannada Bible (KNCL) BSI 2016
ಅರಸ ಸೊಲೊಮೋನನಿಗೆ ವಿರುದ್ಧ ದಂಗೆ ಎದ್ದವರಲ್ಲಿ, ಅವನ ಸೇವಕನೂ ಚರೇದ ಊರಿನ ಎಫ್ರಯೀಮ್ಯನಾದ ನೆಬಾಟನ ಮಗನೂ ಆಗಿದ್ದ, ಯಾರೊಬ್ಬಾಮ ಎಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆ ಅವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ಅರಸನಾದ ಸೊಲೊಮೋನನಿಗೆ ವಿರೋಧವಾಗಿ ದಂಗೆ ಎದ್ದವರಲ್ಲಿ ಅವನ ಸೇವಕನೂ ಚರೇದ ಪಟ್ಟಣದ ಎಫ್ರಾಯೀಮ್ಯನಾದ ನೆಬಾಟನ ಮಗ ಯಾರೊಬ್ಬಾಮನು ಇದ್ದನು, ಚೆರೂಯಳೆಂಬ ವಿಧವೆಯು ಅವನ ತಾಯಿಯು.