1 Kings 11:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನಿಗೆ ಏಳುನೂರು ಮಂದಿ ಪತ್ನಿಯರಿದ್ದರು. (ಈ ಸ್ತ್ರೀಯರು ಅನ್ಯದೇಶಗಳ ನಾಯಕರ ಹೆಣ್ಣುಮಕ್ಕಳು) ಅವನಿಗೆ ಪತ್ನಿಯರಂತಿರುವ ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದೇವರಿಗೆ ವಿಮುಖನನ್ನಾಗಿ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಜನರು ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.
Kannada BSI Bible 2016
ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.
Kannada Bible (KNCL) BSI 2016
ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಮಹಿಳೆಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ ರಾಜಪುತ್ರಿಯರಾದ ಏಳು ನೂರು ಮಂದಿ ಪತ್ನಿಯರೂ, ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದಾರಿ ತಪ್ಪಿಸಿದರು.