1 Kings 11:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.
Kannada BSI Bible 2016
ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.
Kannada Bible (KNCL) BSI 2016
ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.