1 Kings 11:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಸರಿಯಾದ ಮಾರ್ಗದಲ್ಲಿ ಜೀವಿಸುತ್ತಾ, ನನ್ನ ಆಜ್ಞೆಗಳನ್ನು ಅನುಸರಿಸಿದರೆ, ನಾನು ಈ ಕಾರ್ಯಗಳೆನ್ನೆಲ್ಲ ನಿನಗೆ ಮಾಡುವೆನು. ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ದಾವೀದನಂತೆ ಅನುಸರಿಸಿದರೆ ನಾನು ನಿನ್ನೊಂದಿಗೆ ಇರುತ್ತೇನೆ. ನಾನು ನಿನ್ನ ಕುಟುಂಬವನ್ನು ದಾವೀದನ ಕುಟುಂಬದಂತೆ ರಾಜರುಗಳ ಕುಟುಂಬವನ್ನಾಗಿ ಮಾಡುತ್ತೇನೆ. ನಾನು ನಿನಗೆ ಇಸ್ರೇಲನ್ನು ಕೊಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವುದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು. ಇಸ್ರಾಯೇಲ್ ರಾಜ್ಯವು ನಿನ್ನ ಪಾಲಾಗುವುದು.
Kannada BSI Bible 2016
ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಾಯೇಲ್‍ರಾಜ್ಯವು ನಿನ್ನ ಪಾಲಾಗುವದು.
Kannada Bible (KNCL) BSI 2016
ನನ್ನ ದಾಸ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ, ನೀನೂ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಯೇಲ್ ರಾಜ್ಯ ನಿನ್ನ ಪಾಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು.