1 Kings 11:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ವೃದ್ಧನಾದಾಗ, ತನ್ನ ಪತ್ನಿಯರ ದೆಸೆಯಿಂದಾಗಿ ಅನ್ಯದೇವತೆಗಳನ್ನು ಅನುಸರಿಸಿದನು. ತನ್ನ ತಂದೆಯಾದ ದಾವೀದನು ಯೆಹೋವನನ್ನು ಅನುಸರಿಸಿದಂತೆ ಸೊಲೊಮೋನನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.
Kannada BSI Bible 2016
ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಯಥಾರ್ಥಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡಿಯಲಿಲ್ಲ.
Kannada Bible (KNCL) BSI 2016
ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.