1 Kings 11:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಪ್ರಯತ್ನಿಸಿದನು. ಆದರೆ ಯಾರೊಬ್ಬಾಮನು ಈಜಿಪ್ಟಿಗೆ ಓಡಿಹೋದನು. ಅವನು ಈಜಿಪ್ಟಿನ ರಾಜನಾದ ಶೀಶಕನ ಬಳಿಗೆ ಹೋದನು. ಸೊಲೊಮೋನನು ಸಾಯುವವರೆಗೆ ಯಾರೊಬ್ಬಾಮನು ಅಲ್ಲಿಯೇ ನೆಲೆಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವ ವರೆಗೆ ಅಲ್ಲಿಯೇ ಇದ್ದನು.
Kannada BSI Bible 2016
ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವವರೆಗೆ ಅಲ್ಲಿಯೇ ಇದ್ದನು.
Kannada Bible (KNCL) BSI 2016
ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು, ಈಜಿಪ್ಟಿನ ಅರಸ ಶೀಶಕನ ಬಳಿಗೆ ಹೋಗಿ, ಸೊಲೊಮೋನನು ಜೀವದಿಂದಿರುವವರೆಗೆ ಅಲ್ಲಿಯೇ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ನಿಮಿತ್ತ ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಹುಡುಕಿದನು. ಆದ್ದರಿಂದ ಯಾರೊಬ್ಬಾಮನು ಎದ್ದು, ಈಜಿಪ್ಟಿನ ಅರಸನಾದ ಶೀಶಕನ ಬಳಿಗೆ ಈಜಿಪ್ಟಿಗೆ ಓಡಿಹೋಗಿ, ಸೊಲೊಮೋನನು ಸಾಯುವವರೆಗೂ ಅಲ್ಲಿ ಇದ್ದನು.