1 Kings 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಸೊಲೊಮೋನನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದಾಗಿದ್ದ ಕಾರ್ಯಗಳನ್ನು ಮಾಡಿದನು; ತನ್ನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಿದಂತೆ ಅನುಸರಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ.
Kannada BSI Bible 2016
ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ.
Kannada Bible (KNCL) BSI 2016
ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆ ದಾವೀದನು ಪೂರ್ಣಮನಸ್ಸಿನಿಂದ ಸರ್ವೇಶ್ವರನನ್ನು ಸೇವೆಮಾಡಿದಂತೆ ಅವನು ಸೇವೆಮಾಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು ತನ್ನ ತಂದೆ ದಾವೀದನ ಹಾಗೆ ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸದೆ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.