1 Kings 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಅನ್ಯದೇಶಗಳ ತನ್ನ ಪತ್ನಿಯರಿಗೆಲ್ಲ ಇದೇ ರೀತಿ ಮಾಡಿದನು. ಅವನ ಪತ್ನಿಯರು ತಮ್ಮ ದೇವರುಗಳಿಗೆ ಧೂಪಹಾಕಿದರು ಮತ್ತು ಯಜ್ಞಗಳನ್ನು ಅರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ರೀತಿಯಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಹಾಕುವುದಕ್ಕೂ ಮತ್ತು ಯಜ್ಞವರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು.
Kannada BSI Bible 2016
ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪ್ರಕಾರವಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಸುಡುವದಕ್ಕೂ ಯಜ್ಞವರ್ಪಿಸುವದಕ್ಕೂ ಅನುಕೂಲಮಾಡಿಕೊಟ್ಟನು.
Kannada Bible (KNCL) BSI 2016
ಈ ಪ್ರಕಾರ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಾರತಿ ಎತ್ತುವುದಕ್ಕೂ ಬಲಿ ಅರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು, ಬಲಿಗಳನ್ನು ಅರ್ಪಿಸುವ ತನ್ನ ಅನ್ಯಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.